ನವದೆಹಲಿ: ಭಾರತದಲ್ಲಿ 1,249 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,927 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ.
ಕರ್ನಾಟಕ ಮತ್ತು ಗುಜರಾತ್‌ನಲ್ಲಿ ತಲಾ ಒಂದು ಸಾವು ವರದಿಯಾಗಿದ್ದು, ಸಾವಿನ ಸಂಖ್ಯೆ 5,30,818 ಕ್ಕೆ ಏರಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಣಗೊಂಡ ಅಂಕಿ ಅಂಶಗಳು ಹೇಳಿವೆ.
ದೈನಂದಿನ ದೃಢ ಪ್ರಮಾಣ ಶೇಕಡ 1.19 ರಷ್ಟಿದೆ. ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ.
ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇಕಡ 0.02 ರಷ್ಟಿದೆ. ಕೋವಿಡ್ ಚೇತರಿಕೆ ದರ ಶೇ 98.79 ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕೋವಿಡ್ ಪತ್ತೆಗಾಗಿ ಇದುವರೆಗೆ 92.07 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 1,05,316 ಪರೀಕ್ಷೆಗಳನ್ನು ನಡೆಸಲಾಗಿದೆ.
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,61,922 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡ 1.19 ರಷ್ಟಿದೆ.
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.65 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.