ತಿರುವನಂತಪುರ: ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 9ರಿಂದ 29ರವರೆಗೆ ನಡೆಯಲಿದೆ.
ಮಾರ್ಚ್ 10 ರಿಂದ ಹೈಯರ್ ಸೆಕೆಂಡರಿ ಪರೀಕ್ಷೆಗಳೂ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಶಿಕ್ಷಣ ಸಚಿವ ವಿ.ಶಿವಂಕುಟ್ಟಿ ತಿರುವನಂತಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆ ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ. 4,19,362 ಸಾಮಾನ್ಯ ವಿದ್ಯಾರ್ಥಿಗಳು ಮತ್ತು 192 ಖಾಸಗಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪೈಕಿ 2,13801 ಬಾಲಕರು ಮತ್ತು 2,00,561 ಬಾಲಕಿಯರು. ಈ ಬಾರಿ 2960 ಪರೀಕ್ಷಾ ಕೇಂದ್ರಗಳಿವೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಏಪ್ರಿಲ್ 3ರಿಂದ 24ರವರೆಗೆ ಮೌಲ್ಯಮಾಪನ ಆರಂಭವಾಗಲಿದ್ದು, 70 ಶಿಬಿರಗಳಲ್ಲಿ 18000ಕ್ಕೂ ಹೆಚ್ಚು ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗುವುದು. ಹೈಯರ್ ಸೆಕೆಂಡರಿ ವಿಭಾಗದಲ್ಲಿ ಪ್ರಥಮ ವರ್ಷದ 4,25361 ಹಾಗೂ ದ್ವಿತೀಯ ವರ್ಷದ 4,42067 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ 9.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಏಪ್ರಿಲ್ 3ರಂದು ಹೈಯರ್ ಸೆಕೆಂಡರಿ ವಿಭಾಗದ ಮೌಲ್ಯಮಾಪನ ಶಿಬಿರವೂ ಆರಂಭವಾಗಲಿದೆ. ಇದಕ್ಕಾಗಿ 25000 ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.
ಹೈಯರ್ ಸೆಕೆಂಡರಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ರೀತಿಯ ಒತ್ತಡವನ್ನು ನಿವಾರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು 'ವಿ ಹೆಲ್ಪ್' ಎಂಬ ಟೋಲ್-ಫ್ರೀ ದೂರವಾಣಿ ಸಹಾಯವಾಣಿಯನ್ನು ಪ್ರಾರಂಭಿಸಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ 18 00 42 52 844 ಗೆ ಕರೆ ಮಾಡಬಹುದು. ಪರೀಕ್ಷೆ ಮುಗಿಯುವವರೆಗೆ ಎಲ್ಲಾ ಕೆಲಸದ ದಿನಗಳಲ್ಲಿ ಟೋಲ್ ಫ್ರೀ ಸೇವೆ ಲಭ್ಯವಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಮಾರ್ಚ್ 9 ರಿಂದ 29 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ: ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ: 10ರಿಂದ ಹೈಯರ್ ಸೆಕೆಂಡರಿ ಪರೀಕ್ಷೆ: ಸಿದ್ಧತೆ ಪೂರ್ಣ: ಸಚಿವರಿಂದ ಮಾಹಿತಿ
0
ಮಾರ್ಚ್ 04, 2023