ಶಿಲ್ಲಾಂಗ್: ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ಕಾನ್ರಾಡ್ ಸಂಗ್ಮಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಮೇಘಾಲಯದಲ್ಲಿ ಮಂಗಳವಾರ ರಾಜ್ಯಪಾಲ ಫಾಗು ಚೌಹಾಣ್ ಅವರು ಕಾನ್ರಾಡ್ ಸಂಗ್ಮಾ ಅವರಿಗೆ ಪ್ರಮಾಣವಚನ ಬೋಧಿಸಿದರು.
ಇವರ ಜೊತೆಗೆ 12 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
ಎನ್‌ಪಿಪಿ ನೇತೃತ್ವದ ಮೈತ್ರಿಕೂಟವು ಬಿಜೆಪಿಯ ಇಬ್ಬರು ಸೇರಿದಂತೆ 45 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿತ್ತು. ಎನ್‌ಪಿಪಿ 26, ಯುಡಿಪಿ 11, ಕಾಂಗ್ರೆಸ್ 5, ಟಿಎಂಸಿ 5, ಬಿಜೆಪಿ, ಎಚ್‌ಎಸ್‌ಪಿಡಿಪಿ, ಪಿಡಿಎಫ್ ತಲಾ 2, ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.