ಪೆರ್ಲ : ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ನಿವೃತ್ತರಾಗಲಿರುವ ಶಿಕ್ಷಕರಿಗೆ ಸನ್ಮಾನ ಸಮಾರಂಭ ಶಾಲೆಯಲ್ಲಿ ಜರುಗಿತು. ಬೆಳಗ್ಗೆ ನಡೆದ ಸಮಾರಂಭದಲ್ಲಿ ಶಾಲಾ ವಿದ್ಯಾವರ್ದಕ ಸಂಘದ ಅಧ್ಯಕ್ಷ ಬಿ,ಜಿ ರಾಮ ಭಟ್ ಧ್ವಜಾರೋಹಣ ನಡೆಸಿದರು. ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.
ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ ಸಮಾರಂಭ ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಜ್ಯೋತಿಲಕ್ಷ್ಮೀ ಕಾಕುಂಜೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಬಂಧಕ ಶ್ರೀಕೃಷ್ಣ ವಿಶ್ವಾ ಮಿತ್ರ ಹಾಗೂ ಬದಿಯಡ್ಕ ಠಾಣೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿನೋದ್ ಕುಮಾರ್ ಬಹುಮಾನ ವಿತರಿಸಿದರು. ಈ ಸಂದರ್ಭ ಶಾಲೆಯಿಂದ ಈ ವರ್ಷ ನಿವೃತ್ತರಾಗಲಿರುವ ಶಾಲಾ ಮುಖ್ಯ ಶಿಕ್ಷಕ ಮಹಾಲಿಂಗೇಶ್ವರ ಎಸ್ ಹಾಗೂ ಹಿರಿಯ ಶಿಕ್ಷಕಿ ಸುಶೀಲಾ ಜಿ. ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಮಂಗಳೂರು ಏನಪೋಯ ಆಸ್ಪತ್ರೆ ಮನೋರೋಗ ತಜ್ಞ ಡಾ. ಪಿ.ಎಂ.ಎ ನಿಶಾದ್ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ವಕೀಲ ರಾಜಾರಾಮ ಸೂರ್ಯಂಬೈಲು ಅಭಿನಂದನಾ ಭಾಷಣ ಮಾಡಿದರು.
ಕಾಸರಗೋಡು ಜಿ.ಪಂ ಸದಸ್ಯ ನಾರಾಯಣ ನಾಯ್ಕ್, ಎಣ್ಮಕಜೆ ಪಂಚಾಯಿತಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಬಿ.ಎಸ್ ಗಾಂಭೀರ್, ಕುಂಬಳೆ ಉಪಜಿಲ್ಲಾ ಬಿಪಿಸಿ ಜಯರಾಮ್ ಜೆ, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್ ಟಿ, ಎನ್.ಎಂ.ಪಿ ಧ್ಯಕ್ಷ ಗಣೇಶ್ ಭಟ್ ಮುನ್ಚಿಕಾನ, ಎಂಪಿಟಿಎ ಅಧ್ಯಕ್ಷೆ ಶ್ರೀಕೃಪಾ, ಕ್ರೀಡಾ ಸಮಿತಿ ಅಧ್ಯಕ್ಷ ಹಮೀದ್ ಕುರಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಜೆ ನಡೆದ ಸಾಂಸ್ಕøತಿಕ ವೈವಿಧ್ಯ ಕಾರ್ಯಕ್ರಮದಲ್ಲಿ ಅಂಗನವಾಡಿ, ಎಲ್ಕೆಜಿ, ಯುಕೆಜಿ ಹಾಗೂ ಎಲ್.ಪಿ ಶಾಲಾ ವಿದ್ಯಾರ್ಥಿಗಳು, ಶಾಲಾ ಹಳೇ ವಿದ್ಯಾರ್ಥಿಗಲಿಂದ ಸಾಂಸ್ಕøತಿಕ ವೈವಿಧ್ಯ ನಡೆಯಿತು.
ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಗೌರವಾರ್ಪಣೆ
0
ಮಾರ್ಚ್ 06, 2023
Tags