ನವದೆಹಲಿ: ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾವುದೇ ಬೆಲೆ ತೆರಲು ಸಿದ್ಧ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಭಾರತದ ಧ್ವನಿಗಾಗಿ ನಾನು ಹೋರಾಡುತ್ತಿದ್ದೇನೆ.ಯಾವುದೇ ಬೆಲೆ ತೆರಲು ಸಿದ್ಧವಾಗಿದ್ದೇನೆ' ಎಂದು ತಿಳಿಸಿದ್ದಾರೆ.
ಮಾರ್ಚ್ 23ರಂದು ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.