ತಿರುವನಂತಪುರಂ: ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ ಕೆಲವೇ ಗಂಟೆಗಳಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚಿಸಿದ್ದಾರೆ.
ನೌಕರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಬಗ್ಗೆ ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸಚಿವರು ಸೂಚಿಸಿದರು.
ಆಂತರಿಕ ವಿಚಾರಣೆ ನಡೆಸಲು ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಮೆಡಿಕಲ್ ಕಾಲೇಜಿನ ಹೆಚ್ಚುವರಿ ಅಧೀಕ್ಷಕರು, ಆರ್‍ಎಂಒ, ನರ್ಸಿಂಗ್ ಅಧಿಕಾರಿ ಮುಂತಾದವರು ಸದಸ್ಯರು. ಶನಿವಾರ ಥೈರಾಯ್ಡ್ ಶಸ್ತ್ರಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸಾ ಐಸಿಯು ಹೊರಗೆ ವಿಶ್ರಾಂತಿ ಪಡೆಯುತ್ತಿದ್ದ ಯುವತಿಗೆ ವೈದ್ಯಕೀಯ ಕಾಲೇಜು ಅಟೆಂಡೆಂಟ್ ಕಿರುಕುಳ ನೀಡಿದ್ದಾನೆ.
ಮಹಿಳೆ ಅರೆಪ್ರಜ್ಞಾವಸ್ಥೆಯಲ್ಲಿದ್ದು, ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ವೈದ್ಯರು ಮತ್ತು ತಂಡವು ಮತ್ತೊಬ್ಬ ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡಲು ತೆರಳಿದ್ದ ವೇಳೆಯೇ ನೌಕರ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆದರೆ ನಂತರ ಮಹಿಳೆ ತನಗೆ ಎದುರಾದ ಕಿರುಕುಳದ ಬಗ್ಗೆ ಸಂಬಂಧಿಕರಿಗೆ ತಿಳಿಸಿದ್ದು, ಸಂಬಂಧಿಕರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಯನ್ನು ಗುರುತಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂಬುದು ಪೆÇಲೀಸರು ನೀಡಿರುವ ಮಾಹಿತಿ.
ಕೋಝಿಕ್ಕೋಡ್ ನಲ್ಲಿ ಶಸ್ತ್ರಚಿಕಿತ್ಸೆಯ ಕೆಲವೇ ಗಂಟೆಗಳಲ್ಲಿ ಯುವತಿಗೆ ಕಿರುಕುಳ; ತುರ್ತು ತನಿಖೆಗೆ ಆರೋಗ್ಯ ಸಚಿವರ ಆದೇಶ
0
ಮಾರ್ಚ್ 20, 2023