ಕುಂಬಳೆ: :ಅಂಗಡಿಮೊಗರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ವಾರ್ಷಿಕೋತ್ಸವ ಮತ್ತು ಸೇವೆಯಿಂದ ನಿವೃತ್ತರಾಗುತ್ತಿರುವ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರುಗಿತು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಸಮಾರಂಭ ಉದ್ಘಾಟಿಸಿದರು. ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಮಾಧವನ್ ಪಿ.ಎಂ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭ ಶಾಲಾ ಪ್ರಂಶುಪಾಲ ಶಾಜು ಸಿ.ಕೆ ಹಾಗೂ 20ವರ್ಷಗಳಿಗೂ ಹೆಚ್ಚುಕಾಲ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಹ್ಮಣ್ಯ ಭಟ್ ಸಇ.ಎಚ್ ಅವರನ್ನು ಶಾಲೆ ವತಿಯಿಂದ ಗೌರವಿಸಲಾಯಿತು. ಶಾಸಕ ಎ.ಕೆ.ಎಂ ಅಶ್ರಫ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ನಾರಾಯಣ ನಾಯ್ಕ್ ಅಡ್ಕಸ್ಥಳ, ಕಮಲಾಕ್ಷಿ ಕೆ, ಪುತ್ತಿಗೆ ಗ್ರಾ.ಪಂ ಉಪಾಧ್ಯಕ್ಷೆ ಜಯಂತಿ, ಜನಪ್ರತಿನಿಧಿಗಳು, ಶಾಲಾ ರಕ್ಷಕ ಶಿಕ್ಷಕ ಸಂಘ ಪದಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಿತು.
ಅಂಗಡಿಮೊಗರು ಶಾಲಾ ವಾರ್ಷಿಕೋತ್ಸವ, ನಿವೃತ್ತರಾಗುವ ಶಿಕ್ಷಕರಿಗೆ ಬೀಳ್ಕೊಡುಗೆ
0
ಮಾರ್ಚ್ 31, 2023
Tags