ಕುಂಬಳೆ : ಬಿಜೆಪಿಯು ಮೂರು ರಾಜ್ಯಗಳಲ್ಲಿ ಅಭುತಪೂರ್ವ ಗೆಲುವು ಸಾಧಿಸಿ ಮರಳಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಸಲುವಾಗಿ ಕುಂಬಳೆ ಪೇಟೆಯಲ್ಲಿ ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತ್ರತ್ವದಲ್ಲಿ ಸಿಡಿಮದ್ದು ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ ವಹಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಸದಸ್ಯ ಮುರಳೀಧರ ಯಾದವ್, ಮಂಡಲ ಉಪಾಧ್ಯಕ್ಷ ರಮೇಶ ಭಟ್, ಪ್ರೇಮಲತಾ ಎಸ್, ಕಾರ್ಯದರ್ಶಿ ಸ್ವಾಗತ, ಧನರಾಜ, ಜನಪ್ರತಿನಿದಿಗಳಾದ ಪ್ರೇಮಾವತಿ, ಮೋಹನ ಬಂಬ್ರಾಣ, ಅಜಯ, ವಿವೇಕಾನಂದ ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಮಂಡಲ ಕಾರ್ಯದರ್ಶಿ ಕೆ. ಸುಧಾಕರ ಕಾಮತ್ ಸ್ವಾಗತಿಸಿ, ಒಬಿಸಿ ಮೋರ್ಚಾ ಮಂಡಲ ಅಧ್ಯಕ್ಷರಾದ ಮಹೇಶ್ ಪುಣಿಯೂರು ವಂದಿಸಿದರು.
ಬಿಜೆಪಿ ಗೆಲುವು: ಕುಂಬಳೆಯಲ್ಲಿ ವಿಜಯೋತ್ಸವ
0
ಮಾರ್ಚ್ 04, 2023