ಮಂಜೇಶ್ವರ
: ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವದ ಹೊಸ್ತಿಲಲ್ಲಿದ್ದು ಆ
ಪ್ರಯುಕ್ತ ಶಾಲಾ ಶತಮಾನೋತ್ಸವದ ಉದ್ಘಾಟನಾ ಸಮಾರಂಭವು ನಾಳೆ (ಎ.2) ನಡೆಯಲಿದೆ.
ಬೆಳಿಗ್ಗೆ 9:30 ಕ್ಕೆ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್
ಹಾಜಿ ಕಂಚಿಲರವರು ಧ್ವಜಾರೋಹಣಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು. ಬಳಿಕ
ಊರವರಿಗೆ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ.
ಅಪರಾಹ್ನ
ಗಂಟೆ 2:30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಕೇರಳ ಸರಕಾರದ
ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ನೆರವೇರಿಸುವರು. ಅಧ್ಯಕ್ಷತೆಯನ್ನು ಮಂಜೇಶ್ವರ
ಶಾಸಕರಾದ ಎ. ಕೆ. ಎಂ. ಅಶ್ರಫ್ ವಹಿಸಲಿರುವರು. ಕಾರ್ಯಕ್ರಮದಲ್ಲಿ ಕಾಸರಗೋಡು ಸಂಸದ ರಾಜ್
ಮೋಹನ್ ಉಣ್ಣಿತ್ತಾನ್, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಹೇರಂಬ ಇಂಡಸ್ಟ್ರೀಸ್
ಮುಂಬೈನ ಅಧ್ಯಕ್ಷರಾದ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ, ಕಾಸರಗೋಡು ಜಿಲ್ಲಾ
ಶಿಕ್ಷಣಾಧಿಕಾರಿ ನಂದಿಕೇಶನ್ ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಅತಿಥಿಗಳಾಗಿ ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ಕೇರಳ ತುಳು
ಅಕಾಡೆಮಿಯ ಅಧ್ಯಕ್ಷರಾದ ಕೆ. ಆರ್. ಜಯಾನಂದ, ಮೀಂಜ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರಾದ
ಜಯರಾಮ ಬಲ್ಲಂಗುಡೇಲ್, ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷರಾದ ಬಾಬು ಸಿ, ವಿದ್ಯಾಭ್ಯಾಸ
ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ಅಭಿವೃದ್ಧಿ ಸ್ಥಾಯೀ ಸಮಿತಿ
ಅಧ್ಯಕ್ಷೆ ರುಖಿಯಾ ಸಿದ್ದೀಕ್, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ,
ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯರಾದ ಅಶ್ವಿನಿ ಎಂ. ಎಲ್, ಮೀಂಜ ಗ್ರಾಮ ಪಂಚಾಯತ್
ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್
ವಿ, ಮಂಜೇಶ್ವರ ಬ್ಲಾಕ್ ಪ್ರೋಗ್ರಾಂ ಕೋರ್ಡಿನೇಟರ್ ವಿಜಯ ಕುಮಾರ್ ಪಿ, ಮೀಂಜ ಗ್ರಾಮ
ಪಂಚಾಯತ್ ಕಾರ್ಯದರ್ಶಿ ನಂದಗೋಪಾಲ್, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್
ಆಗಮಿಸಲಿರುವರು.
ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ
ಶರ್ಮ ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ
ಸಂಘದ ಅಧ್ಯಕ್ಷೆ ಸುನೀತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ
ಕಂಚಿಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು
ಉಪಸ್ಥಿತರಿರುವರು.
ಬಳಿಕ ಅಂಗನವಾಡಿ ಪುಟಾಣಿಗಳು, ಾಲಾ
ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಸ್ಥಳೀಯ ಸಂಘ
ಸಂಸ್ಥೆಗಳ ಸದಸ್ಯರು, ಕುಟುಂಬಶ್ರೀ ಸದಸ್ಯರು ಹಾಗೂ ಊರವರಿಂದ ವಿವಿಧ ಸಾಂಸ್ಕೃತಿಕ
ಕಾರ್ಯಕ್ರಮಗಳು, ತುಳು ಹಾಸ್ಯಮಯ ನಾಟಕ ನಡೆಯಲಿದೆ.