ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 1,071 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ (4,46,95,420) ಏರಿಕೆಯಾಗಿದೆ.
ಆ ಪೈಕಿ 5,30,802 ಮಂದಿ ಸಾವಿಗೀಡಾಗಿದ್ದಾರೆ.
ಕೋವಿಡ್‌ನಿಂದಾಗಿ ಶನಿವಾರ ರಾಜ್ಯಸ್ಥಾನ, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,915ಕ್ಕೆ ತಲುಪಿದೆ.
ಪಾಸಿಟಿವಿಟಿ ದರ ಶೇ 0.01ರಷ್ಟಿದರೆ, ಚೇತರಿಕೆ ಪ್ರಮಾಣ ಶೇ 98.8 ರಷ್ಟಿದೆ. ಉಳಿದಂತೆ ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ದೇಶದಾದ್ಯಂತ ಇದುವರೆಗೆ 220.65 ಕೋಟಿ ಕೋವಿಡ್ ಡೋಸ್ ಲಸಿಕೆ ವಿತರಿಸಲಾಗಿದೆ.