ನವದೆಹಲಿ(ANI): ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ನೂತನ ಸಂಸತ್ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ, ಕಟ್ಟಡ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸುಮಾರು ಒಂದು ಗಂಟೆಗೂ ಅಧಿಕ ಸಮಯವನ್ನು ನೂತನ ಕಟ್ಟಡದ ಒಳಗಡೆಯೇ ಪ್ರಧಾನಿ ಮೋದಿ ಕಳೆದಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿ ನಿರ್ಮಾಣವಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದರು ಎಂದು ಮೂಲಗಳು ತಿಳಿಸಿವೆ.
More visuals from PM Modi's surprise visit to the new Parliament building. He inspected various works along with observing the facilities coming up at both Houses of the Parliament: Sources