ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಹಾಸಭೆ ಕಾಸರಗೋಡಿನಲ್ಲಿ ಜರುಗಿತು. ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ, ದಕ್ಷಿಣ ಕನ್ನಡ ಘಟಕದ ನೂತನ ಅಧ್ಯಕ್ಷ ಪದ್ಮನಾಭ ಶೆಟ್ಟಿ ಸಮಾರಂಭ ಉದ್ಘಾಟಿಸಿದರು.
ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್ ಬಾಗ್ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಭಾಗವಹಿಸಿ, ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಚಟುವಟಿಕೆಗಳು, ವಾರ್ಷಿಕವಾಗಿ ನಡೆಸಬೇಕಾದ ಕಡ್ಡಾಯ ನಾಲ್ಕು ಸಭೆಗಳು, ಕ್ರಿಯಾಯೋಜನೆಯಂತೆ ಜನ ಜಾಗೃತಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜನಜಾಗೃತಿ ಸದಸ್ಯರುಗಳ ಸಂಪೂರ್ಣ ಸಹಕಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಯಮಾನುಸಾರ ಸುಂಕದಕಟ್ಟೆ ವಲಯಾಧ್ಯಕ್ಷರಾಗಿದ್ದ ಡಾ.ಜಯಪ್ರಕಾಶ್ ನಾರಾಯಣ್ ತೊಟ್ಟೆತೋಡಿ ಅವರನ್ನು ನೂತನ ಅಧ್ಯಕ್ಷ, ತಲಪಾಡಿ ವಲಯಾಧ್ಯಕ್ಷ ಹರೀಶ್ ಶೆಟ್ಟಿ ಕಡಂಬಾರು ಅವರನ್ನು ಉಪಾಧ್ಯಕ್ಷರನ್ನಾಗಿಯೂ ಆಯ್ಕೆಮಾಡಲಾಯಿತು. ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ದಕ್ಷಿಣ ಕನ್ನಡ ಕಾರ್ಯಕಾರಿ ಮಂಡಳಿಯ ಸದಸ್ಯರನ್ನಾಗಿ ಬದಿಯಡ್ಕ ವಲಯಾಧ್ಯಕ್ಷರಾದ ಶ್ರೀ ಅಖಿಲೇಶ್ ನಗುಮುಗಂ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ವಿಶೇಷವಾಗಿ ಶೌರ್ಯ ವಿಪತ್ತು ಘಟಕದ ಪ್ರತಿನಿಧಿಗಳಿಗೆ ಮತ್ತು ಸಂಯೋಜಕರಿಗೆ ಪೂಜ್ಯರು ಕೊಡಮಾಡಿದ ರೂ.2ಲಕ್ಷ ಮೌಲ್ಯದ ಅಗತ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು.
ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲಿಯಾನ್ ದ.ಕ.-2 ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ನಿಕಟಪೂರ್ವ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲ್, ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಯೋಜನೆಯ ಶೌರ್ಯ ವಿಭಾಗದ ಯೋಜನಾಧಿಕಾರಿ ಜೈವಂತ್ ಪಟಗಾರ, ಕೇಂದ್ರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ್ ಕುಮಾರ್, ವಲಯ್ಯಾಧ್ಯಕ್ಷರುಗಳಾದ ಜ್ಞಾನೇಶ್ ಆಚಾರ್ಯ, ಸುರೇಶ್, ರೋಹಿತಾಕ್ಷ, ಜನಜಾಗೃತಿ ವೇದಿಕೆಯ ಸದಸ್ಯರುಗಳು, ಮೇಲ್ವಿಚಾರಕರು, ಉಪಸ್ಥಿತರಿದ್ದರು. ಕಾಸರಗೋಡು ಯೋಜನಾಧಿಕಾರಿಯಾದ ಮುಖೇಶ್ ಸ್ವಾಗತಿಸಿದರು. ಜನಜಾಗೃತಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ವಂದಿಸಿದರು.
ಶ್ರೀಕ್ಷೇತ್ರ. ಧ.ಗ್ರಾ.ಯೋಜನೆ ಕಾಸರಗೋಡು ಜನಜಾಗೃತಿ ವೇದಿಕೆ ಮಹಾಸಭೆ
0
ಮಾರ್ಚ್ 24, 2023