HEALTH TIPS

ಹೈದರಾಬಾದ್‌ನಲ್ಲಿ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆ: ಕಿಶನ್‌ ರೆಡ್ಡಿ

 

               ಹೈದರಾಬಾದ್‌: ಕೇಂದ್ರ ಸರ್ಕಾರವು ಅಂದಾಜು ₹400 ಕೋಟಿ ವೆಚ್ಚದಲ್ಲಿ ಇಲ್ಲಿನ ಬೆಗಂಪೇಟೆ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆಯನ್ನು (ಸಿಎಆರ್‌ಒ) ಸ್ಥಾಪಿಸಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.

                    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧೀನದಲ್ಲಿ ಸ್ಥಾಪಿಸಲಾಗುವ ಈ ಕೇಂದ್ರದಲ್ಲಿ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳು ನಡೆಯಲಿವೆ ಎಂದೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

                       ಈ ವರ್ಷದ ಜುಲೈನಿಂದಲೇ ಇಲ್ಲಿ ಸಂಶೋಧನಾ ಕಾರ್ಯಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದೂ ಸಚಿವರು ವಿವರಿಸಿದ್ದಾರೆ.

              ವಿಮಾನ ನಿಲ್ದಾಣಗಳು, ಏರ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌, ಸೈಬರ್‌ ಸುರಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತೂ ಈ ಸಂಸ್ಥೆಯಲ್ಲಿ ಸಂಶೋಧನೆ ನಡೆಯಲಿದೆ ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries