HEALTH TIPS

ಶಾಲಾ ಪ್ರಾಂಶುಪಾಲರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್ ಪ್ಯಾಕೆಟ್‌ಗಳು ಪತ್ತೆ!

 

                ಮಧ್ಯಪ್ರದೇಶ: ಮೊರೆನಾದ ಹೆಸರಾಂತ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ದಿಢೀರ್ ತಪಾಸಣೆ ನಡೆಸಿದಾಗ ಆಘಾತಕಾರಿ ಸಂಗತಿಗಳು ಮತ್ತು ಸಾಮಗ್ರಿಗಳು ಬೆಳಕಿಗೆ ಬಂದಿವೆ. ಮಕ್ಕಳ ಹಕ್ಕು ಸಂರಕ್ಷಣಾ ಆಯೋಗದ ಸದಸ್ಯರೊಬ್ಬರು ತಪಾಸಣೆ ನಡೆಸಿದಾಗ, ಗ್ರಂಥಾಲಯದ ಪಕ್ಕದ ಕೊಠಡಿಯಲ್ಲಿ ಮದ್ಯದ ಬಾಟಲಿಗಳು ಮತ್ತು ಕಾಂಡೋಮ್‌ಗಳ ಪ್ಯಾಕೆಟ್‌ಗಳು ಕಂಡುಬಂದಿದೆ ಎನ್ನಲಾಗಿದೆ.

                ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ನಿವೇದಿತಾ ಶರ್ಮಾ, ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಎ ಕೆ ಪಾಠಕ್ ಅವರೊಂದಿಗೆ ಸಾಮಾನ್ಯ ತಪಾಸಣೆಗಾಗಿ ಮೊರೆನಾ ಜಿಲ್ಲೆಯ ಖಾಸಗಿ ಶಾಲೆಗೆ ಭೇಟಿ ನೀಡಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು ಮತ್ತು ಕಾಂಡೋಮ್ ಪತ್ತೆಯಾಗಿದ್ದವು. ಆಕ್ಷೇಪಾರ್ಹ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡಕ್ಕೆ ಸೀಲ್‌ ಹಾಕಲಾಗಿದೆ.

                  'ಶಾಲಾ ಆವರಣದಲ್ಲಿ ಮದ್ಯಕ್ಕೆ ಅವಕಾಶವಿಲ್ಲ. ಇದು ಕಾನೂನು ಉಲ್ಲಂಘನೆಯಾಗಿದೆ. ಇಷ್ಟೊಂದು ಪ್ರಮಾಣದ ಮದ್ಯವನ್ನು ಯಾರೂ ಇಟ್ಟುಕೊಳ್ಳುವಂತಿಲ್ಲ. ಇದು ಕಾನೂನು ಬಾಹಿರವಾಗಿರುವುದರಿಂದ ಈ ಬಗ್ಗೆ ಇಲಾಖೆ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳುತ್ತಿದೆ' ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ನಿವೇದಿತಾ ಶರ್ಮಾ ಹೇಳಿದ್ದಾರೆ.

                 ಪ್ರಾಂಶುಪಾಲರು ಮತ್ತು ಶಾಲಾ ವ್ಯವಸ್ಥಾಪಕರ ಕೊಠಡಿಗಳು ಮಕ್ಕಳ ತರಗತಿಗಳಿಗೆ ಜೋಡಿಸಲ್ಪಟ್ಟಿರುವುದಕ್ಕೆ ತನಿಖಾಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಮತ್ತು ಮದ್ಯದ ಬಾಟಲಿಗಳು ಸೇರಿದಂತೆ ಇತರ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿರೋದ್ರಿಂದ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಶಾಲೆಯ ಗ್ರಂಥಾಲಯದಲ್ಲಿ ನಿರ್ದಿಷ್ಟ ಧರ್ಮವನ್ನು ಪ್ರಚಾರ ಮಾಡುವ ಪುಸ್ತಕವೊಂದು ಕಂಡು ಬಂದಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಯನ್ನು ವಶಕ್ಕೆ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದು, ಅಬಕಾರಿ ಇಲಾಖೆ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿದೆ.

                  ಶಾಲೆಯ ಪ್ರಾಂಶುಪಾಲರು ಆರೋಪವನ್ನು ತಳ್ಳಿಹಾಕಿದ್ದಾರೆ. ವಸತಿ ಪ್ರದೇಶವು ಕ್ಯಾಂಪಸ್‌ನಿಂದ ಹೊರಗಿದೆ. ಖಾಲಿ ಬಾಟಲಿಗಳು ಮತ್ತು ಎರಡು ಬಾಟಲಿಗಳಲ್ಲಿ ಮದ್ಯ ತುಂಬಿರಬಹುದು. ನಾವು ಮದ್ಯ ಸೇವಿಸುವ ಜನರಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries