ನವದೆಹಲಿ: ದೆಹಲಿಯ ವಿವಿಧ ಭಾಗಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಾವಿರಾರು ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದಕ್ಕೆ ಸಂಬಂಧಿಸಿ 44 ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಹಲವು ಭಾಗಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 2,000 ಪೋಸ್ಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪೋಸ್ಟರ್‌ಗಳಲ್ಲಿ ಹೆಚ್ಚಿನವು 'ಮೋದಿ ಹಠಾವೋ, ದೇಶ್ ಬಚಾವೋ' (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ) ಎಂಬ ಘೋಷಣೆಯನ್ನು ಹೊಂದಿದ್ದವು.
ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಮತ್ತು ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್ ಹೆಸರನ್ನು ಕಡ್ಡಾಯವಾಗಿ ಹೊಂದಿರಬೇಕೆಂಬ ಕಾನೂನಿನ ಅಡಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೋಸ್ಟರ್‌ಗಳನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಗೆ ತಲುಪಿಸಲಾಗುತ್ತಿದ್ದ ವೇಳೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆಂಟ್ರಲ್ ದೆಹಲಿಯ ಐಪಿ ಎಸ್ಟೇಟ್ ಪ್ರದೇಶದಲ್ಲಿ ವ್ಯಾನ್ ಅನ್ನು ಅಡ್ಡಗಟ್ಟಿದ ಪೊಲೀಸರು ಪೋಸ್ಟರ್‌ಗಳನ್ನು ಪತ್ತೆ ಹಚ್ಚಿದ್ದಾರೆ. ಪೋಸ್ಟರ್‌ಗಳನ್ನು ಎಎಪಿ ಕೇಂದ್ರ ಕಚೇರಿಗೆ ತಲುಪಿಸುವಂತೆ ಸೂಚಿಸಲಾಗಿದೆ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರ ಕ್ರಮವನ್ನು ಖಂಡಿಸಿರುವ ಎಎಪಿ, 'ಇದು ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆ ಸಾಕ್ಷಿ' ಎಂದು ವಾಗ್ದಾಳಿ ನಡೆಸಿದೆ.
ಸುಮಾರು 50,000 ಪೋಸ್ಟರ್‌ಗಳನ್ನು ಮುದ್ರಿಸಲು ನಮಗೆ ಒಪ್ಪಂದ ಬಂದಿದೆ ಎಂದು ಬಂಧಿತ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಪೊಲೀಸರಿಗೆ ತಿಳಿಸಿದ್ದಾರೆ. ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್‌ನ ಹೆಸರಿಲ್ಲದ ಕಾರಣ ಮಾಲೀಕರನ್ನು ಬಂಧಿಸಲಾಗಿದೆ.