ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ನಿಗದಿಪಡಿಸಿದೆ.
ಸೋಮವಾರ ವಿಚಾರಣೆಗಾಗಿ ನಿಗದಿಯಾಗಿರುವ ಅರ್ಜಿಗಳ ಪಟ್ಟಿಯನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹನ್ ಮತ್ತು ಜೆ.ಬಿ. ಪಾರ್ದಿವಾಲ ಅವರನ್ನು ಒಳಗೊಂಡ ಪೀಠವು ಸಲಿಂಗ ವಿವಾಹದ ಕುರಿತು ಸಲ್ಲಿಕೆ ಆಗಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.
ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪರ ವಕೀಲರು ಮತ್ತು ಅರ್ಜಿದಾರರ ಪರ ವಕೀಲರು ಒಟ್ಟಾಗಿ ತಯಾರಿಸಿದ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು ಎನ್ನಲಾಗಿದೆ.