ಕತಾರ್: ಕತಾರ್‌ನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರಕ್ಕೆ 2023-2024 ನೇ ಸಾಲಿಗೆ ಹೊಸ ವ್ಯವಸ್ಥಾಪಕ ಸಮಿತಿಯನ್ನು ರಚಿಸಲಾಗಿದೆ.
ಕತಾರ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವು 2023 ಮತ್ತು 2024 ನೇ ಸಾಲಿಗೆ ಹೊಸ ನಿರ್ವಹಣಾ ಸಮಿತಿಯನ್ನು ರಚಿಸಿದೆ. ಅಧ್ಯಕ್ಷ ಎ.ಪಿ.ಮಣಿಕಂಠನ್ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದೆ.
ಹೊಸ ತಂಡದೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಹಿಂದಿನ ಸಮಿತಿಯ ಪಿ.ಎನ್. ಬಾಬುರಾಜನ್ ಅವರಿಗೆ ಧನ್ಯವಾದ ಅರ್ಪಿಸಲಾಯಿತು. ಮುಂದಿನ ಎರಡು ವರ್ಷಗಳಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಉನ್ನತೀಕರಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.