HEALTH TIPS

ಜನಪ್ರತಿನಿಧಿಗಳ ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

 

               ನವದೆಹಲಿ: ಶಿಕ್ಷೆ ಪ್ರಕಟವಾದ ಕೂಡಲೇ ಚುನಾಯಿತ ಜನಪ್ರತಿನಿಧಿಗಳ ಸದಸ್ಯತ್ವವನ್ನು ಅನರ್ಹಗೊಳಿಸುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ ಅರ್ಜಿ ಸಲ್ಲಿಸಲಾಗಿದೆ.

                   1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 8(3) ಅನ್ವಯ ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

                       ಸೆಕ್ಷನ್‌ 8(3) ಅನ್ವಯ ಜನಪ್ರತಿನಿಧಿಯೊಬ್ಬರು ಕನಿಷ್ಠ ಎರಡು ವರ್ಷ ಶಿಕ್ಷೆಗೆ ಗುರಿಯಾದರೆ, ತಕ್ಷಣದಿಂದ ಜಾರಿಗೆ ಬರುವಂತೆ ಅವರ ಸದಸ್ಯತ್ವ ಅನರ್ಹವಾಗಲಿದೆ.

                      2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಮಾಡಿದ ಭಾಷಣ ಸಂಬಂಧ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸದಸ್ವತ್ಯ ರದ್ದು ಮಾಡಿ ಲೋಕಸಭೆ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.


                   ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿರುತ್ತದೆ ಎಂದು ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್‌ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಾಗಿತ್ತು. ಪ್ರಕರಣಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಗುರುವಾರ ಆದೇಶ ಹೊರಡಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿ,ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.

                   ಮಾರ್ಚ್‌ 23ರಿಂದ ಅನ್ವಯವಾಗುವಂತೆ ರಾಹುಲ್‌ ಗಾಂಧಿಯವರ ಲೋಕಸಭೆ ಸದಸ್ಯತ್ವ ಅನರ್ಹಗೊಂಡಿದೆ.

              ಸದ್ಯ ರಾಹುಲ್‌ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡ್‌ ಲೋಕಸಭಾ ಕ್ಷೇತ್ರ ತೆರವಾಗಿದೆ. ಇನ್ನು ಆರು ತಿಂಗಳಲ್ಲಿ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ್ದು. ಜತೆಗೆ ಕೇಂದ್ರ ದೆಹಲಿಯಲ್ಲಿ ತಮಗೆ ನೀಡಲಾಗಿರುವ ಸರ್ಕಾರಿ ಬಂಗಲೆಯನ್ನು ರಾಹುಲ್‌ ಗಾಂಧಿ ಅವರು ತೊರೆಯಬೇಕು.

                 ಸೂರತ್‌ ನ್ಯಾಯಾಲಯ ನೀಡಿದ ತೀರ್ಪನ್ನು ಪ‍್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶ ರಾಹುಲ್‌ ಗಾಂಧಿ ಅವರಿಗಿದೆ. ಶಿಕ್ಷೆಗೆ ಹಾಗೂ ಅನರ್ಹತೆಗೆ ತಡೆ ನೀಡುವ ಅಧಿಕಾರ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗೆ ಇದೆ.

                ಒಂದು ವೇಳೆ ಉನ್ನತ ನ್ಯಾಯಾಲಯದಲ್ಲೂ ಇದೇ ತೀರ್ಪು ಬಂದರೆ, ರಾಹುಲ್ ಗಾಂಧಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು. ಅಲ್ಲದೇ, ಶಿಕ್ಷೆ ಪೂರ್ಣಗೊಳಿಸಿದ ಬಳಿಕ 6 ವರ್ಷ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

Petition filed in Supreme Court challenging automatic disqualification of representatives of elected legislative bodies after conviction. The plea challenges the constitutional validity of Section 8(3) of the Representatives of People's Act. The plea seeks direction that…
Image
2.4K
Reply
Copy link

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries