ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಆರನೇ ಘಟಿಕೋತ್ಸವ ಮಾ. 25ರಂದು ಬೆಳಗ್ಗೆ 10ಕ್ಕೆ ಕ್ಯಾಂಪಸ್ ಸಭಾಂಗಣದಲ್ಲಿ ನಡೆಯಲಿದೆ. ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಮತ್ತು ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರೀಯ ವಿಶ್ವ ವಿದ್ಯಾಲಯ ಉಪಕುಲಪತಿ ಪ್ರೊ. ಎಚ್. ವೆಂಕಟೇಶ್ವರಲು ಅಧ್ಯಕ್ಷತೆ ವಹಿಸುವರು.
ಪಿಜಿ ಮತ್ತು ಪಿಜಿ ಡಿಪೆÇ್ಲಮಾ, ಪಿಎಚ್‍ಡಿ, ಯುಜಿ, ಶಿಕ್ಷಕರು, ವಿಶ್ವವಿದ್ಯಾಲಯ ಕೋರ್ಟ್, ಕಾರ್ಯನಿರ್ವಾಹಕಪರಿಷತ್ತಿನ ಸದಸ್ಯರು, ಹಣಕಾಸು ಸಮಿತಿ, ಶೈಕ್ಷಣಿಕ ಸಮಿತಿ ಮತ್ತು ವಿಭಾಗಗಳ ಮುಖ್ಯಸ್ಥರು, ಡೀನ್‍ಗಳು, ಶಾಸನಬದ್ಧ ಅಧಿಕಾರಿಗಳು ಮತ್ತು ವಿಶೇಷ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ. 2020 ರಲ್ಲಿ, ವಿಶ್ವವಿದ್ಯಾನಿಲಯವು ಸಾಂಪ್ರದಾಯಿಕ ಉಡುಪಿನಲ್ಲಿ ಪದವಿ ಸಮಾರಂಭವನ್ನು ನಡೆಸಿದ್ದು, 2021-2022ರಲ್ಲಿ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳಿಗೆ ಈ ವರ್ಷ ಪದವಿ ಪ್ರದಾನ ಸಮಾರಂಭ ನಡೆಯುತ್ತಿದೆ. 1947ಮಂದಿ ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ. ಇದರಲ್ಲಿ 1567 ವಿದ್ಯಾರ್ಥಿಗಳು ನೇರವಾಗಿ ಭಾಗವಹಿಸಲು ನೋಂದಾಯಿಸಿಕೊಂಡಿದ್ದಾರೆ. 82 ಮಂದಿಗೆ ಸ್ನಾತಕೋತ್ತರ ಪದವಿ, 1732 ಮಂದಿಗೆ ಸ್ನಾತಕೋತ್ತರ ಪದವಿ, 57 ಮಂದಿಗೆ ಡಾಕ್ಟರೇಟ್, 54 ಮಂದಿಗೆ ಪಿಜಿ ಡಿಪೆÇ್ಲಮಾ ಹಾಗೂ 22 ಮಂದಿಗೆ ಪ್ರಮಾಣಪತ್ರ ನೀಡಲಾಗುವುದು. ರಿಜಿಸ್ಟ್ರಾರ್ ಡಾ.ಎಂ. ಮುರಳೀಧರ ನಂಬಿಯಾರ್, ಪ್ರಭಾರಿ ಪರೀಕ್ಷಾ ನಿಯಂತ್ರಕ ಪೆÇ್ರ. ಎಂ.ಎನ್.ಮುಸ್ತಫಾ, ವಿಶ್ವವಿದ್ಯಾನಿಲಯದ ಕೋರ್ಟ್ ಸದಸ್ಯರು, ಕಾರ್ಯಕಾರಿ ಮಂಡಳಿಯ ಸದಸ್ಯರು, ಶೈಕ್ಷಣಿಕ ಪರಿಷತ್ತಿನ ಸದಸ್ಯರು, ಹಣಕಾಸು ಸಮಿತಿಯ ಸದಸ್ಯರು, ಸಮುದಾಯ ಪ್ರತಿನಿಧಿಗಳು, ವಿವಿಧ ಶಾಲೆಗಳ ಡೀನ್‍ಗಳು, ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿ ಮುಂತಾದವರು ಉಪಸ್ಥಿತರಿರುವರು. ಈ ಸಂದರ್ಭ ವಿಶ್ವ ವಿದ್ಯಾಲಯ ಕ್ಯಾಂಪಸ್‍ನಲ್ಲಿ ಸ್ಥಾಪಿಸಲಾಗಿರುವ ಸ್ವಾಮಿ ವಿವೇಕಾನಂದ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು.
ಇಂದು ಕೇಂದ್ರೀಯ ವಿಶ್ವ ವಿದ್ಯಾಲಯದ ಆರನೇ ಘಟಿಕೋತ್ಸವ: ಪದವಿ ಸಮಾರಂಭಕ್ಕೆ ಸಾಂಪ್ರದಾಯಿಕ ಉಡುಗೆ
0
ಮಾರ್ಚ್ 24, 2023