ಶ್ರೀನಗರ: ಕಾಶ್ಮೀರ ಕಣಿವೆಗೆ ಇತರ ಭಾಗಗಳೊಂದಿಗೆ ಸಂಪರ್ಕ ಕಲ್ಪಿಸುವ ಉಧಂಪುರ-ಬನಿಹಾಲ್ ರೈಲು ಮಾರ್ಗ ಈ ವರ್ಷ ಪೂರ್ಣಗೊಳ್ಳ ಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಶ್ರೀನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗವು ಡಿಸೆಂಬರ್ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ರೈಲುಗಳ ಸಂಚಾರಕ್ಕೆ ಮುಕ್ತವಾಗಲಿದೆ.