ನವದೆಹಲಿ: ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರಿಗೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿನಲ್ಲಿ ಭಾರತೀಯ ಜನತಾ ಯುವ ಮೋರ್ಚಾದ 'ರಾಷ್ಟ್ರೀಯ ಯುವ ಸಂಸತ್' ಉದ್ಘಾಟಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ಎಲ್ಲ ಮಿತಿಗಳನ್ನು ಮೀರಿದ್ದಾರೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ತಮ್ಮ ನಾಚಿಕೆಗೇಡಿನ ಹೇಳಿಕೆ ಮೂಲಕ ದೇಶದ ಪ್ರಜಾಸಾತ್ತಾತ್ಮಕ ಮೌಲ್ಯಗಳನ್ನು ಅವಮಾನಿಸಿದ್ದಲ್ಲದೆ ದೇಶದ ಆಂತರಿಕ ವ್ಯವಹಾರದಲ್ಲಿ ಮಧ್ಯಪ್ರವೇಶಿಸುವಂತೆ ವಿದೇಶಿ ರಾಷ್ಟ್ರಗಳನ್ನು ಆಹ್ವಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಜನರು ರಾಹುಲ್ ಮಾತನ್ನು ಆಲಿಸುವುದಿಲ್ಲ ಬದಲಾಗಿ ಸಹಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.
ದೇಶದ ಪ್ರಜಾಪ್ರಭುತ್ವ ಅಪಾಯಲ್ಲಿರುವುದಾಗಿ ಲಂಡನ್‌ನಲ್ಲಿ ಟೀಕಿಸಿದ್ದ ರಾಹುಲ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಬಿಗಿ ಪಟ್ಟು ಹಿಡಿದಿದೆ. ಇದರಿಂದಾಗಿ ಸಂಸತ್ ಕಲಾಪಕ್ಕೂ ಅಡ್ಡಿಯಾಗಿದೆ.