ನವದೆಹಲಿ: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಬುಧವಾರ ಮುಂಬೈ ಕರಾವಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸುಧಾರಿತ ಲಘು ಹೆಲಿಕಾಪ್ಟರ್ (ALH) ದಿನನಿತ್ಯದ ವಿಹಾರದಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಎಂದು NDTV ವರದಿ ಮಾಡಿದೆ.
ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
"ಭಾರತೀಯ ನೌಕಾಪಡೆ ALH ಮುಂಬೈನ ಕರಾವಳಿಯ ತಟದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಕ್ಷಣದ ಹುಡುಕಾಟ ಹಾಗೂ ನೌಕಾ ಗಸ್ತು ಕ್ರಾಫ್ಟ್ ಮೂಲಕ ಮೂವರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ" ಎಂದು ನೌಕಾಪಡೆ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ತಿಳಿಸಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ.