ಮಂಜೇಶ್ವರ: ವರ್ಕಾಡಿ ಕೊಂಡೆವೂರು ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಹೇರಂಭ ಗಣಪತಿ ಹೋಮ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮಾ. 5ರಂದು ಬೆಳಗ್ಗೆ 8ಕ್ಕೆ ಜರುಗಲಿದೆ. ಬ್ರಹ್ಮಶ್ರೀ ದಿನೇಶ್ ಕೃಷ್ಣ ತಂತ್ರಿ ನೇತೃತ್ವ ವಹಿಸುವರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿ ಹಾಗೂ ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.
ಹೇರಂಭ ಗಣಪತಿ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
0
ಮಾರ್ಚ್ 04, 2023