ಬಾಲಾಘಾಟ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ವಿಮಾನವೊಂದು ಪತನಗೊಂಡು, ಇಬ್ಬರು ತರಬೇತಿನಿರತ ಪೈಲಟ್‌ಗಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ವಿಮಾನ ಪತನಗೊಂಡಿರುವ ಲಾಂಜಿ ಮತ್ತು ಕಿರ್ನಾಪುರ ಪರ್ವತ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪುರುಷನ ಮೃತದೇಹವೊಂದು ದೊರೆತಿದ್ದು, ಇದರ ಗುರುತು ಪತ್ತೆಗಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.