ಭಾರತದ ಇಕೋ ಫಾನ್ ಪ್ರತಿನಿಧಿಯಾಗಿ ಯುಎನ್ಎಚ್ಆರ್ಸಿಯಲ್ಲಿ ಮೌಖಿಕ ಹೇಳಿಕೆಯನ್ನು ಸಲ್ಲಿಸಲು ಹೆಮ್ಮೆ ಪಡುತ್ತೇನೆ. ಅರಣ್ಯವಾಸಿಗಳ ಸಾಂಸ್ಕೃತಿಕ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಮತ್ತು ಕಾಂತಾರದಲ್ಲಿ ಅರಣ್ಯಗಳ ಸಂರಕ್ಷಣೆಯ ಮಹತ್ವವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪರಿಸರದ ಮಹತ್ವ, ಅದರೊಂದಿಗೆ ಜನರ ನಂಟು, ನಂಬಿಕೆ, ಆಚರಣೆಗಳನ್ನು ಕಾಂತಾರದಲ್ಲಿ ಹೇಗೆ ತೋರಿಸಲಾಗಿದೆ ಎಂಬ ಕುರಿತು ಸಿನಿಮಾ ಪ್ರದರ್ಶಿಸುವ ಮೂಲಕ ಅನಾವರಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ಕನ್ನಡದಲ್ಲಿ ಮಾತನಾಡಿದ್ದು ನಿಜಕ್ಕೂ ಅದ್ಭುತ. ಅಭಿನಂದನೆಗಳು, ನಿಮ್ಮ ಕನ್ನಡಪ್ರೇಮಕ್ಕೆ ನನ್ನ ಹೃದಯಾಂತರಾಳದಿಂದ ಗೌರವವನ್ನು ಅರ್ಪಿಸುತ್ತೇನೆ ಎಂಬುದಾಗಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಿಷಬ್ ಶೆಟ್ಟಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.