ಕಾಸರಗೋಡು: ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಚಟ್ಟಂಚಾಲ್ ಕೈಗಾರಿಕಾ ಪಾರ್ಕ್‍ನಲ್ಲಿ ಆರಂಭಿಸಲಾಗಿರುವ ಆಕ್ಸಿಜನ್ ಸ್ಥಾವರದ ಕಾರ್ಯನಿರ್ವಹಣೆಗಾಗಿ ಅನುಭವಿಗಳಿಂದ ಆಸಕ್ತಿಪತ್ರ ಸ್ವೀಕರಿಸಲು ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿ.ಪಂ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಒಂದು ದಿನಕ್ಕೆ ಗರಿಷ್ಠ 200 ಸಿಲಿಂಡರ್‍ಗಳ ಉತ್ಪಾದನಾ ಸಾಮಥ್ರ್ಯದೊಂದಿಗೆ ವೈದ್ಯಕೀಯ ಉದ್ದೇಶಗಳಿಗಾಗಿ ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕವನ್ನು ಉತ್ಪಾದಿಸಲಾಗುತ್ತದೆ. ವಾತಾವರಣದ ಆಮ್ಲಜನಕವನ್ನು ಬಳಸಿಕೊಂಡು ಉತ್ಪಾದನೆಯನ್ನು ಮಾಡಲಾಗುತ್ತದೆ. ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವ ದೃಷ್ಟಿಯಿಂದ ಆಮ್ಲಜನಕ ಘಟಕವನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವಿ ವ್ಯಕ್ತಿಗಳಿಂದ ಆಸಕ್ತಿ ಪತ್ರವನ್ನು ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸ್ಥಾವರದ ಕಾರ್ಯಾಚರಣೆಯು ಜಿಲ್ಲಾ ಪಂಚಾಯತ್ ಮೇಲ್ವಿಚಾರಣೆಯಲ್ಲಿ ನಡೆಯಲಿದೆ. ಸಾಂಕ್ರಾಮಿಕ ರೋಗಗಳು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಸಿಲಿಂಡರ್ ವಿತರಣೆಯು ಜಿಲ್ಲಾ ಪಂಚಾಯತ್ ನ ನಿಯಂತ್ರಣದಲ್ಲಿರಲಿದೆ.
ಕೋವಿಡ್ ಹರಡುವಿಕೆ ತೀವ್ರಗೊಂಡಿದ್ದ ಸಂದರ್ಭ ಜಿಲ್ಲೆಯಲ್ಲಿ ಆಮ್ಲಜನಕದ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ 3.50 ಕೋಟಿ ವೆಚ್ಚದಲ್ಲಿ ಕೈಗಾರಿಕಾ ಪಾರ್ಕ್‍ನಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕರು ಯೋಜನೆಯ ನೋಡಲ್ ಅಧಿಕಾರಿಯಾಗಿದ್ದಾರೆ.
ವೈದ್ಯಕೀಯ ಉದ್ದೇಶಕ್ಕಾಗಿ 50 ಸಿಲಿಂಡರ್‍ಗಳನ್ನು ಆಕ್ಸಿಜನ್ ಪ್ಲಾಂಟ್‍ಗೆ ತಕ್ಷಣ ಖರೀದಿಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಾನವಾಸ್ ಪಾದೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗೀತಾಕೃಷ್ಣನ್, ಕೆ.ಶಕುಂತಲಾ, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಜಿ.ಶೆರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್, ಸಹಾಯಕ ನಿರ್ದೇಶಕ ಕೆ.ಪಿ.ಸಜೀರ್, ಜಿಲ್ಲಾ ಪಂಚಾಯತ್ ಯೋಜನಾ ಸಮಿತಿ ಉಪಾಧ್ಯಕ್ಷ ಕೆ. ಬಾಲಕೃಷ್ಣನ್, ಹಣಕಾಸು ಅಧಿಕಾರಿ ಸಲೀಂ, ಕೆ.ಸುನೀಲ್ ಉಪಸ್ಥಿತರಿದ್ದರು.
ಆಮ್ಲಜನಕ ಸ್ಥಾವರವದ ಕಾರ್ಯನಿರ್ವಹಣೆ: ಜಿಲ್ಲಾ ಪಂಚಾಯಿತಿ ಸಭೆ
0
ಮಾರ್ಚ್ 18, 2023
Tags