ನವದೆಹಲಿ: ಐಎಎಸ್ ಅಧಿಕಾರಿಗಳು ಸಲ್ಲಿಸಿರುವ ಆಸ್ತಿ ವಿವರದ ಸತ್ಯಾಸತ್ಯತೆ ಪರಿಶೀಲಿಸುವ ವ್ಯವಸ್ಥೆ ರೂಪಿಸಿ ಎಂದು ಸಂಸದೀಯ ಸಮಿತಿಯು ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ) ಸೂಚಿಸಿದೆ.
2011ರಿಂದ 2022ರ ವರೆಗಿನ ಅವಧಿಯಲ್ಲಿ 1,393 ಐಎಎಸ್ ಅಧಿಕಾರಿಗಳು ತಮ್ಮ ವಾರ್ಷಿಕ ಸ್ಥಿರ ಆಸ್ತಿಯ ಮಾಹಿತಿಯನ್ನು ಸಲ್ಲಿಸಿಲ್ಲ ಎಂದು ಇಲಾಖೆ ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿ ಈಚೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಲಾಗಿದೆ.