ಬದಿಯಡ್ಕ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ವತಿಯಿಂದ ಶುಕ್ರವಾರ ರಾಜ್ಯಾದ್ಯಂತ ಮುಷ್ಕರ ನಡೆಯಿತು. ಉಕ್ಕಿನಡ್ಕ ಮೆಡಿಕಲ್ ಕಾಲೇಜು ಆವರಣದಲ್ಲಿ ಜರಗಿದ ಪ್ರತಿಭಟನಾ ಸಭೆಯನ್ನು ಐಎಂಎ ಪ್ರಮುಖ ಡಾ. ನಾರಾಯಣ ಪ್ರದೀಪ ಉದ್ಘಾಟಿಸಿ ಮಾತನಾಡಿ, ವೈದ್ಯರು, ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದರು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ಉಕ್ಕಿನಡ್ಕದಲ್ಲಿ ವೈದ್ಯರಿಂದ ಪ್ರತಿಭಟನೆ
0
ಮಾರ್ಚ್ 18, 2023