ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ನಲ್ಲಿ ತಮ್ಮ ಬಯೋವನ್ನು ಬದಲಾಯಿಸಿದ್ದಾರೆ.
ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದು ರಾಹುಲ್ ಗಾಂಧಿಯವರ ಅಧಿಕೃತ ಖಾತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ, Dis'qualified' MP ಎಂದು ಬರೆದುಕೊಂಡಿದ್ಧಾರೆ.
ಅದಾನಿ ಸಮೂಹ ಸಂಸ್ಥೆಗಳ ಹಗರಣದ ಬಗ್ಗೆ ನಾನು ಸಂಸತ್ತಿನಲ್ಲಿ ಎಲ್ಲಿ ಧ್ವನಿ ಎತ್ತುತ್ತೇನೆ ಎಂದು ಭಯಬೀತರಾಗಿರುವ ಪ್ರಧಾನಿ ಮೋದಿ ನನ್ನನು ಅನರ್ಹ ಮಾಡುವ ಮೂಲಕ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವನ್ನು ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದರು.