HEALTH TIPS

ಮನ್ ಕಿ ಬಾತ್​​ 100ನೇ ಸಂಚಿಕೆ: 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆ

                   ನವದೆಹಲಿ: ಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಮನ್ ಕಿ ಕಾರ್ಯಕ್ರಮ ಬಹಳ ವಿಶೇಷವಾಗಿದೆ. ಈ ಬಾರಿ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದ್ದು, ಈ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ.

                ಕಾರ್ಯಕ್ರಮ ಕುರಿತು ಬಿಜೆಪಿ ವಿವರವಾದ ಮಾಹಿತಿಗಳನ್ನು ಬಿಡುಗಡೆ ಮಾಡಿದೆ. ಅದರಂತೆ ದೇಶಾದ್ಯಂತ ಸುಮಾರು 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಸಿದ್ಧತೆಗಳ ನಡೆಸುತ್ತಿರುವುದಾಗಿ ತಿಳಿದುಬಂದಿದೆ. ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡುವ ಸಲುವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಸಂಪೂರ್ಣ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆಂದು ವರದಿಗಳು ತಿಳಿಸಿವೆ. ದೇಶದಾದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ 100 ಸ್ಥಳಗಳಲ್ಲಿ ಕಾರ್ಯಕ್ರಮ ಕೇಳಲು ವ್ಯವಸ್ಥೆ ಮಾಡಲಾಗುತ್ತಿದ್ದು, ಲಕ್ಷಾಂತರ ಜನರು ಇದಕ್ಕೆ ಸಾಕ್ಷಿಯಾಗಲಿದ್ದಾರೆಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

                ‘ಮನ್ ಕಿ ಬಾತ್’ನ 100ನೇ ಸಂಚಿಕೆ ಭಾನುವಾರ ಪ್ರಸಾರವಾಗಲಿದೆ. ಸುಮಾರು 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡಲು ವ್ಯವಸ್ಥೆ ಮಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಅವರು ಮಾಹಿತಿ ನೀಡಿದ್ದಾರೆ.

               ವಿದೇಶದಲ್ಲಿರುವ ಜನರಲೂ ಕೂಡ ಕಾರ್ಯಕ್ರಮ ಆಲಿಸುವಂತೆ ಮಾಡಲು ಹಲವಾರು ರಾಜಕೀಯೇತರ ಸಂಸ್ಥೆಗಳೂ ಕೂಡ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಎಲ್ಲಾ ರಾಜಭವನಗಳು, ರಾಜ್ಯಪಾಲರ ಅಧಿಕೃತ ನಿವಾಸಗಳು ಮತ್ತು ಬಿಜೆಪಿ ಅಥವಾ ಅದರ ಮಿತ್ರಪಕ್ಷಗಳ ಮುಖ್ಯಮಂತ್ರಿಗಳ ಮನೆಗಳಲ್ಲಿ ಗಣ್ಯರು ಕಾರ್ಯಕ್ರಮವನ್ನು ಆಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

                ಎಲ್ಲಾ ರಾಜ್ಯಗಳ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ರಾಜಭವನದಲ್ಲಿ ಕಾರ್ಯಕ್ರಮವನ್ನು ಆಲಿಸಲು ಆಹ್ವಾನ ನೀಡಲಾಗಿದೆ. ಈ ಕುರಿತ ಸಿದ್ಧತೆಗಳನ್ನು ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಡ್ಡಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಈ ನಿಟ್ಟಿನಲ್ಲಿ ಹಲವಾರು ವೀಡಿಯೊ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಪ್ರತಿ ವಿಧಾನಸಭೆಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ಥಳೀಯ ಸಂಸದರು, ಶಾಸಕರು, ಇತರೆ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು, ಪಕ್ಷದ ಹಿರಿಯ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ಮಾಹಿತಿ ನೀಡಿದ್ದಾರೆ.

                    ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ದೇಶದ ವಿವಿಧ ಸ್ಥಳಗಳಲ್ಲಿ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ‘ಮನ್ ಕಿ ಬಾತ್’ ಕಾರ್ಯಕ್ರಮ ಯಶಸ್ವಿಗೊಳಿಸಲು ಪಕ್ಷದ ಎಲ್ಲ ಸಂಸದರು, ಶಾಸಕರು ಹಾಗೂ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳಿಗೆ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ರಾಜ್ಯ ಪದಾಧಿಕಾರಿಗಳಿಗೆ ತಲಾ ಒಂದು ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ.

                      ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುವ ಮಾಸಿಕ ರೇಡಿಯೊ ಕಾರ್ಯಕ್ರಮದಲ್ಲಿ ಮೋದಿ ವಿವಿಧ ವಿಷಯಗಳ ಕುರಿತು ಮಾತನಾಡುತ್ತಾರೆ. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾರ್ಯಕ್ರಮ ಆರಂಭಗೊಂಡಿದ್ದು, ಅಂದಿನಿಂದ ಇಂದಿನವರೆಗೂ ನಡೆದುಕೊಂಡು ಬಂದಿದೆ.

                  ಈ ಕಾರ್ಯಕ್ರಮವು "ಸಂಪೂರ್ಣವಾಗಿ ರಾಜಕೀಯೇತರವಾಗಿದ್ದು, 52 ಭಾರತೀಯ ಭಾಷೆಗಳು, ಉಪಭಾಷೆಗಳು ಮತ್ತು 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಕಾರ್ಯಕ್ರಮವು ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿದೆ ಎಂದು ಗೌತಮ್ ಅವರು ಹೇಳಿದ್ದಾರೆ. 'ಮನ್ ಕಿ ಬಾತ್' ಮೂಲಕ ಕೇಳುಗರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಸೃಷ್ಟಿಸುವಲ್ಲಿ ಪ್ರಧಾನಮಂತ್ರಿಗಳು ಯಶಸ್ವಿಯಾಗಿದ್ದಾರೆ. "ಮೋದಿ ಅವರ ನಾಯಕತ್ವವು ದೇಶದ ಸಾಮಾನ್ಯ ಜನರ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚಾಗಲು ಕಾರ್ಯಕ್ರಮವು ಕಾರಣವಾಗಿದೆ. "ಪ್ರಧಾನಮಂತ್ರಿಗಳು ರೇಡಿಯೋ ಕಾರ್ಯಕ್ರಮದ ಮೂಲಕ ಜನರೊಂದಿಗೆ ನೇರವಾಗಿ ಸಂವಹನ ನಡೆಸುತ್ತಿದ್ದು, ಸ್ಪೂರ್ತಿದಾಯಕ ಕಥೆಗಳ ಮೂಲಕ ನಾಗರಿಕರೀಕರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಅವರು ನೀಡುವ ಮಾರ್ಗದರ್ಶನದಿಂದ 'ಮನ್ ಕಿ ಬಾತ್' ಕೇಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries