HEALTH TIPS

ಸಹಾಯದ ನೆಪದಲ್ಲಿ ಗರ್ಭಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 10 ಲಕ್ಷ ರೂ. ವಂಚನೆ: ಯುವಕ ಅರೆಸ್ಟ್​

 

             ಕೊಲ್ಲಂ: ಗರ್ಭಿಣಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಬಂಧಿತನನ್ನು ಸುಬೀರ್​ ಎಂದು ಗುರುತಿಸಲಾಗಿದೆ. ಈತ ಪೂತಕ್ಕುಳಂ ಪರವೂರ್​ ಮೂಲದ ನಿವಾಸಿ.

                  ಪ್ರಕರಣವೊಂದರಲ್ಲಿ ಬಂಧಿಯಾಗಿರುವ ಪತಿಯನ್ನು ಬಿಡುಗಡೆ ಮಾಡಲು ಗರ್ಭಿಣಿಗೆ ಸಹಾಯ ಮಾಡುವುದಾಗಿ ಆರೋಪಿ ಸುಬೀರ್​ ಮುಂದೆ ಬಂದನು.

ಆತನನ್ನು ಸಂತ್ರಸ್ತ ಗರ್ಭಿಣಿ ನಂಬಿದ್ದಳು. ಆದರೆ, ಆಕೆಯ ಆಹಾರದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ ಸುಬೀರ್​ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

                 ಅತ್ಯಾಚಾರ ಮಾಡಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ತೆಗೆದುಕೊಂಡು, ಅತ್ಯಾಚಾರದ ಬಗ್ಗೆ ಎಲ್ಲಾದರೂ ಬಾಯ್ಬಿಟ್ಟರೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.

                ಸಂತ್ರಸ್ತೆ ಜತೆ ಆತ್ಮೀಯತೆ ಬೆಳೆಸಿಕೊಂಡ ಆರೋಪಿ ಸುಬೀರ್​, ಸೇವಾ ಸಹಕಾರಿ ಬ್ಯಾಂಕ್​ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಆಗೊಮ್ಮೆ ಈಗೊಮ್ಮೆ 10 ಲಕ್ಷ ರೂ. ಸುಲಿಗೆ ಮಾಡಿದ್ದಾನೆ. ಉದ್ಯೋಗ ಸಂದರ್ಶನದ ನೆಪದಲ್ಲಿ ಆಕೆಯನ್ನು ಎರ್ನಾಕುಲಂನ ಹೋಟೆಲ್‌ಗೆ ಕರೆದೊಯ್ದು ಆಕೆ ಗರ್ಭಿಣಿ ಎಂದು ತಿಳಿದಿದ್ದರೂ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries