ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ.
ಇದೇ ಅವಧಿಯಲ್ಲಿ ಕೋವಿಡ್ ಕಾರಣದ 28 ಸಾವುಗಳು ಸಂಭವಿಸಿದ್ದು, ಕೇರಳವೊಂದರಲ್ಲೇ 9 ಮಂದಿ ಮೃತಪಟ್ಟಿದ್ದಾರೆ.ಇದರೊಂದಿಗೆ ಸಾವಿನ ಸಂಖ್ಯೆ 5,31,258ಕ್ಕೆ ತಲುಪಿದೆ.
ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4.48 ಕೋಟಿ (4,48,69,684)ಗೆ ತಲುಪಿದೆ ಎಂಬುದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯಿಂದ ಗೊತ್ತಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,72,256 ಕ್ಕೆ ಏರಿದೆ.
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯ ವರೆಗೆ ದೇಶದಲ್ಲಿ 220.66 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಲಾಗಿದೆ.