ಕಾಸರಗೋಡು: ಕನ್ನಡ ಹೋರಾಟ ಸಮಿತಿಯ ವಿಶೇಷ ಸಭೆ ಎ.16 ರಂದು ಬೆಳಗ್ಗೆ 10.30 ಕ್ಕೆ ಬ್ಯಾಂಕ್ ರಸ್ತೆಯ ಆ್ಯಕ್ಸಿಸ್ ಬ್ಯಾಂಕ್ ಹಿಂದುಗಡೆಯ ಪರಿಸರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ಕಾಸರಗೋಡು ಕನ್ನಡ ಭಾಷಾ ಅಲ್ಪಸಂಖ್ಯಾತರು ಅನುಭÀವಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರಮಗಳ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ.
ಕಾಸರಗೋಡಿನ ಕನ್ನಡ ಸಂಘ, ಸಂಸ್ಥೆಗಳ ಸದಸ್ಯರು, ಕನ್ನಡ ಮಾಧ್ಯಮ ಅಧ್ಯಾಪಕರು, ವಿದ್ಯಾರ್ಥಿ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿಗಳು, ಪರೀಕ್ಷಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆÉಯನ್ನು ಯಶಸ್ಸುಗೊಳಿಸಬೇಕೆಂದು ಕನ್ನಡ ಹೋರಾಟ ಸಮಿತಿಯ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎ.16 : ಕನ್ನಡ ಹೋರಾಟ ಸಮಿತಿ ವಿಶೇಷ ಸಭೆ
0
ಏಪ್ರಿಲ್ 14, 2023