ಕೋಲ್ಕತ್ತ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 25 (ಮಂಗಳವಾರ) ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಇಲ್ಲಿ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋಲ್ಕತ್ತ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 25 (ಮಂಗಳವಾರ) ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಇಲ್ಲಿ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆ ದಿನ ಮಧ್ಯಾಹ್ನ ಸುಮಾರು ಎರಡು ಗಂಟೆಗೆ ಮಮತಾ ಬ್ಯಾನರ್ಜಿ ಅವರ ಸರ್ಕಾರಿ ಕಚೇರಿ 'ನಬನ್ನಾ'ದಲ್ಲಿ ಅವರಿಬ್ಬರ ಭೇಟಿ ನಡೆಯಲಿದೆ ಎಂದು ಗೊತ್ತಾಗಿದೆ.
2024ರ ಲೋಕಸಭೆ ಚುನಾವಣೆ ಸಂಬಂಧ ಇವರಿಬ್ಬರ ನಡುವೆ ರಹಸ್ಯ ಸಭೆ ನಡೆಯಲಿದೆ.
ಕಳೆದ ತಿಂಗಳು ಮಮತಾ ಬ್ಯಾನರ್ಜಿ ಅವರು ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು, ಕಾಂಗ್ರೆಸೇತರ ಪಕ್ಷಗಳ ಮೈತ್ರಿಕೂಟ ರಚಿಸುವ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ.