ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ವಜ್ರಮಹೋತ್ಸವ ಸಮಾರಂಭಕ್ಕೆ ಏ.3ರಂದು ಇಲ್ಲಿನ ವಿಜ್ಞಾನ ಭವನದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಭಾನುವಾರ ತಿಳಿಸಿದೆ.
ಈ ವೇಳೆ ಅಧಿಕಾರಿಗಳ ಅಮೂಲ್ಯ ಸೇವೆಯನ್ನು ಗುರುತಿಸಿ ರಾಷ್ಟ್ರಪತಿಗಳು ನೀಡುವ ಪೊಲೀಸ್ ಪದಕ ಮತ್ತು ಅತ್ಯುತ್ತಮ ತನಿಖಾಧಿಕಾರಿಗಳಿಗೆ ನೀಡುವ ಚಿನ್ನದ ಪದಕವನ್ನು ಪ್ರದಾನ ಮಾಡಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.