ನವದೆಹಲಿ: ಇ-ಶ್ರಮ್ ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಂಡಿರುವ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡಿದೆ.
ನವದೆಹಲಿ: ಇ-ಶ್ರಮ್ ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಂಡಿರುವ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡಿದೆ.
ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಂಡಿರುವ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವುದರಿಂದ ಅವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಬಹುದು ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು ಹೇಳಿದೆ.
ವಲಸೆ ಕಾರ್ಮಿಕರಿಗೂ ಪಡಿತರ ಚೀಟಿ ನೀಡಬೇಕೆಂದು ಕೋರಿ ಅಂಜಲಿ ಭಾರದ್ವಾಜ್, ಹರ್ಷ ಮಂದರ್ ಮತ್ತು ಜಗದೀಪ್ ಚೊಕ್ಕಾರ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಈ ಆದೇಶ ನೀಡಿದೆ.
'ಕಲ್ಯಾಣ ಯೋಜನೆಗಳ ಪ್ರಯೋಜನಗಳು ಪ್ರತಿ ನಾಗರಿಕನಿಗೂ ಲಭಿಸಬೇಕು. ಈ ಯೋಜನೆಗಳನ್ನು ಜನರಲ್ಲಿಗೆ ತಲುಪಿಸುವುದು ಸರ್ಕಾರದ ಕೆಲಸ' ಎಂದೂ ನ್ಯಾಯಪೀಠ ಹೇಳಿದೆ.
'ಸರ್ಕಾರವು ತನ್ನ ಕರ್ತವ್ಯವನ್ನು ನಿಭಾಯಿಸುತ್ತಿಲ್ಲ ಎಂದು ನಾವು ಹೇಳುತ್ತಿಲ್ಲ. ಆದರೆ ಕೆಲವರು ಯೋಜನೆಗಳಿಂದ ಹೊರಗುಳಿಯುತ್ತಿದ್ದಾರೆ' ಎಂದಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನಿರಾಕರಿಸುವಂತಿಲ್ಲ ಎಂದು ಏಪ್ರಿಲ್ 17ರಂದು ಸುಪ್ರೀಂ ಕೋರ್ಟ್ ಹೇಳಿತ್ತು.