ನವದೆಹಲಿ: ದೇಶದ ಹಲವು ಭಾಗಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ಕೆಲವು ನಗರಗಳಲ್ಲಿ ದಾಖಲೆಯ ಉಷ್ಣಾಂಶ ವರದಿಯಾಗಿದೆ,
ಮಂಗಳವಾರ ಸಂಜೆ ವೇಳೆಗೆ ಉತ್ತರ ಹಾಗೂ ದಕ್ಷಿಣ ರಾಜ್ಯಗಳ ವಿವಿಧ ನಗರಗಳಲ್ಲಿ ತಾಪಮಾನ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವರದಿ ಮಾಡಿದೆ.
ಮಂಗಳವಾರದ ವರದಿ ಪ್ರಕಾರ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ಉಷ್ಣಾಂಶ ದಾಖಲಾಗಿರುವ ನಗರಗಳ ವಿವರ ಇಲ್ಲಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅತ್ಯಧಿಕ ತಾಪಮಾನ ದಾಖಲಾಗಿದೆ.
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 44.2, ಹರಿಯಾಣದ ಹಿಸ್ಸಾರ್‌ನಲ್ಲಿ 41.4, ಕರ್ನಾಲ್ ನಲ್ಲಿ 40.7, ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದಾಗಿ ಐಎಂಡಿ ವರದಿ ಮಾಡಿದೆ.
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆ, ನಂದ್ಯಾಲ, ವಿಶಾಖಪಟ್ಟಣದಲ್ಲಿ 40 ಡಿಗ್ರಿ ಸೆಲ್ಸಿಯಸ್, ಕೇರಳದ ಪಾಲಕ್ಕಾಡ್ 40, ತಮಿಳುನಾಡಿನ ಕರೂರು, ವೆಲ್ಲೂರಿನಲ್ಲಿ 40, ಮಹಾರಾಷ್ಟ್ರದ ನವಿ ಮುಂಬೈನಲ್ಲಿ 40 ಡಿಗ್ರಿ ಸೆಲ್ಸಿಯಸ್, ಉಷ್ಣಾಂಶ ದಾಖಲಾಗಿದೆ.
ಮುಂದಿನ ಐದು ದಿನಗಳ ಕಾಲ ಬಿಸಿಲ ಝಳ ಹೆಚ್ಚಾಗಲಿದ್ದು, ಉಷ್ಣಾಂಶದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆ ಕಂಡುಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.