ತಿರುವನಂತಪುರಂ: ಕೇರಳದಲ್ಲಿ ಇಂದು ಕೂಡ ಭಾರೀ ಬಿಸಿಲಿನ ವಾತಾವರಣ ಮುಂದುವರಿದಿದ್ದು ಕೆಲವು ದಿನ ಇದೇ ರೀತಿ ಉಷ್ಣತೆ ಕಂಡುಬರಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 7 ಜಿಲ್ಲೆಗಳಲ್ಲಿ ಅಧಿಕ ತಾಪಮಾನದ ಎಚ್ಚರಿಕೆ ನೀಡಲಾಗಿದೆ.
ಪಾಲಕ್ಕಾಡ್ ನಲ್ಲಿ 39 ಡಿಗ್ರಿ ಸೆಲ್ಸಿಯಸ್ ಮತ್ತು ಕಣ್ಣೂರು, ಕೋಝಿಕ್ಕೋಡ್, ತ್ರಿಶೂರ್, ಕೊಟ್ಟಾಯಂ, ಆಲಪ್ಪುಳ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ 37 ಡಿಗ್ರಿ ಸೆಲ್ಸಿಯಸ್ ಉμÁ್ಣಂಶ ದಾಖಲಾಗಲಿದೆ.
ತಾಪಮಾನವು ಸಾಮಾನ್ಯಕ್ಕಿಂತ 2 ಸೆಲ್ಶಿಯಸ್ ನಿಂದ 4 ಸೆಲ್ಶಿಯಸ್ ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ. ಸನ್ ಸ್ಟ್ರೋಕ್- ಬಿಸಿಲಾಘಾತ ಬೇಗೆಗೆ ತುತ್ತಾಗುವ ಅಪಾಯವಿದ್ದು, ನೇರವಾಗಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ನಿನ್ನೆ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಕೊಂಚ ಇಳಿಕೆಯಾಗಿತ್ತು. 40 ಡಿಗ್ರಿ ಸೆಲ್ಸಿಯಸ್ ಸಮೀಪ ದಾಖಲಾಗಿದ್ದ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ತಲುಪಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಳಂ, ಇಡುಕ್ಕಿ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುವ ಸಂಭವವಿರುವುದರಿಂದ ಸಾರ್ವಜನಿಕರು ಗುಡುಗು ಸಿಡಿಲಿನ ಎಚ್ಚರಿಕೆಯನ್ನು ಪಾಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ನಿಬರ್ಂಧವಿಲ್ಲ.
ಕೇರಳದಲ್ಲಿ ಮುಂದುವರಿದ ತೀವ್ರ ಬಿಸಿಲು: 7 ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನದ ಎಚ್ಚರಿಕೆ: ಬಿಸಿಲಾಘಾತದ ಎಚ್ಚರಿಕೆ
0
ಏಪ್ರಿಲ್ 16, 2023