ನವದೆಹಲಿ: 'ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಯುಇಟಿ-ಯುಜಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೆ ಮೂರು ದಿನಗಳ ಅವಕಾಶ ಕಲ್ಪಿಸಲಾಗಿದೆ. ಎನ್‌ಸಿಇಆರ್‌ಟಿಯು ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದ್ದರೂ ಕೂಡ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ' ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
'ಹಲವು ವಿದ್ಯಾರ್ಥಿಗಳ ಮನವಿ ಮೇರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೆ ಮೂರು ದಿನಗಳ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಭಾನುವಾರ, ಸೋಮವಾರ ಹಾಗೂ ಮಂಗಳವಾರ ಅರ್ಜಿ ಸಲ್ಲಿಸಬಹುದು. ಮಂಗಳವಾರ ರಾತ್ರಿ 11.59ಕ್ಕೆ (ಇದೇ 11ರಂದು) ಅವಧಿ ಕೊನೆಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು cuet.samarth.ac.in ಗೆ ಭೇಟಿ ನೀಡಬಹುದು' ಎಂದು ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್ ತಿಳಿಸಿದ್ದಾರೆ.
ಈ ಬಾರಿ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಸಿಯುಇಟಿ-ಯುಜಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ 41ರಷ್ಟು ಅಧಿಕವಾಗಿದೆ.