ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಎಫ್ಇಎಂಇ) ಉಲ್ಲಂಘನೆ ಆರೋಪದ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ವಿರುದ್ಧ ಪ್ರಕರಣ ದಾಖಲಿಸಿದೆ.
ಬಿಬಿಸಿಯ ಇಬ್ಬರು ಹಿರಿಯ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಈ ಹಿಂದೆ ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಇಡಿ, ಬಿಬಿಸಿ ಚಾನೆಲ್ ವಿರುದ್ಧ ಪ್ರಕರಣ ದಾಖಲಿಸಿದೆ.
ಐಟಿ ದಾಳಿ
ಗುಜರಾತ್ ಗಲಭೆ ಕುರಿತ ಸಾಕ್ಷ್ಯಾಚಿತ್ರ ಬಿಡುಗಡೆ ಮಾಡಿ ಭಾರತದಲ್ಲಿ ವಿವಾದದ ಅಲೆ
ಎಬ್ಬಿಸಿದ್ದ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಸರ್ವೀಸ್ (ಬಿಬಿಸಿ)ನ ದೆಹಲಿ ಕಚೇರಿಯ
ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಫೆ.14ರಂದು ದಾಳಿ ನಡೆಸಿತ್ತು.
ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ
ಬಿಬಿಸಿ ಕಚೇರಿಗಳಲ್ಲಿ ಶೋಧ ನಡೆಸಿತ್ತು.
ಬಿಬಿಸಿ ವಿವಾದ ಏನು?
ಬಿಬಿಸಿ
ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಕುರಿತಾದ ಸಾಕ್ಷ್ಯಚಿತ್ರವನ್ನು ಬಿಡುಗಡೆ
ಮಾಡಿತು. ಆ ಸಾಕ್ಷ್ಯಚಿತ್ರದ ಪ್ರಮುಖ ವಿಷಯ ಏನೆಂದರೆ 2002ರಲ್ಲಿ ನಡೆದ ಗುಜರಾತ್ ಗಲಭೆ
ಅಥವಾ ಗೋದ್ರಾ ಹತ್ಯಾಕಾಂಡ. ಅಂದು ನಡೆದ ಘಟನೆಯ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರ ಮಾಡಿದೆ.
ಅಷ್ಟಕ್ಕೂ ಈ ಸಾಕ್ಷ್ಯಚಿತ್ರದಲ್ಲಿ ಏನಿದೆ ಎಂದು ನೋಡಿದಾಗ ಸ್ಪಷ್ಟವಾಗಿ
ಗೊತ್ತಾಗುತ್ತೆ, ಇದೊಂದು ಷಡ್ಯಂತ್ರ ಎಂಬುದು.