ನವದೆಹಲಿ: ರಾಮನವಮಿ (ಮಾರ್ಚ್ 30) ಸಂದರ್ಭದಲ್ಲಿ ಪಶ್ಚಿಮ ಬಂಗಾಳ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡ್ ಹಾಗೂ ತೆಲಂಗಾಣದಲ್ಲಿ ನಡೆದ ಗಲಭೆಯಲ್ಲಿ ಎಷ್ಟು ಮೌಲ್ಯದ ಆಸ್ತಿ ನಷ್ಟವಾಗಿದೆ ಹಾಗೂ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅಂದಾಜಿಸಬೇಕು.
ಜೊತೆಗೆ ನಷ್ಟ ಅನುಭವಿಸಿದವರಿಗೆ ತಕ್ಕ ಪರಿಹಾರ ನೀಡಬೇಕು ಎಂದು ಗಲಭೆ ನಡೆದ ಈ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
'ಹಿಂದೂ ಫ್ರಂಟ್ ಫಾರ್ ಜಸ್ಟೀಸ್' ಎನ್ನುವ ಸಂಸ್ಥೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. 'ಶಾಂತಿಯುತವಾಗಿ ಧಾರ್ಮಿಕ ಮೆರವಣಿಗೆ ನಡೆಸಲು, ತಮ್ಮ ಸಂಪ್ರದಾಯವನ್ನು ಆಚರಿಸಲು ಸ್ವತಂತ್ರ ಭಾರತದಲ್ಲಿ ಹಿಂದೂಗಳಿಗೆ ಅವಕಾಶ ನಿರಾಕರಿಸಿರುವುದು ದುರದೃಷ್ಟಕರ. ಜೊತೆಗೆ, ಇಂಥ ಘಟನೆಗಳು ನಡೆಯದಂತೆ ತಡೆಯಲು ಈ ಎಲ್ಲಾ ರಾಜ್ಯ ಸರ್ಕಾರಗಳು ವಿಫಲವಾಗಿವೆ' ಎಂದು ಅರ್ಜಿಯಲ್ಲಿ ದೂರಲಾಗಿದೆ.