ನವದೆಹಲಿ: 2002ರ ದ ಎಂಟು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದೀವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆಯನ್ನು ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಲವು ಮಂದಿ ಅಪರಾಧಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯಲ್ಲಿ ಅಪರಾಧಿಗಳ ಜಾಮೀನು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಏ.17ರಂದು ಹೇಳಿತ್ತು.
2002ರ ಫೆಬ್ರುವರಿಯಲ್ಲಿ ಗುಜರಾತ್‌ನ ಗೋಧ್ರಾ ಬಳಿ ಸಾಬರ್‌ಮತಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಹಲವರನ್ನು ಕೊಲ್ಲಲಾಗಿತ್ತು.