ತಿರುವನಂತಪುರಂ: ಪರಿಸರ ಸೂಕ್ಷ್ಮ ಪ್ರದೇಶಗಳ ಮೇಲಿನ ಎಲ್ಲ ನಿಬರ್ಂಧಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸಮಾಧಾನ ತಂದಿದೆ ಎಂದು ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಹೇಳಿರುವರು. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಚಿವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ರಾಷ್ಟ್ರೀಯ ಉದ್ಯಾನವನಗಳು, ಸಂರಕ್ಷಿತ ಅರಣ್ಯಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ಸುತ್ತಲೂ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ನಿರ್ಮಾಣ ಚಟುವಟಿಕೆಗಳ ಮೇಲೆ ನಿಬರ್ಂಧಗಳಿವೆ. ಕಳೆದ ಜೂನ್‍ನಲ್ಲಿ ಈ ಪ್ರದೇಶಗಳಲ್ಲಿ ಸಂಪೂರ್ಣ ನಿಯಂತ್ರಣವನ್ನು ತರಲಾಯಿತು. ಸುಪ್ರೀಂ ಕೋರ್ಟ್ ಸಂಪೂರ್ಣ ನಿμÉೀಧಾಜ್ಞೆ ಸಡಿಲಿಸಿರುವುದು ಈ ಭಾಗದ ಜನತೆಗೆ ಸಮಾಧಾನ ತಂದಿದೆ ಎಂದು ಎ.ಕೆ. ಶಶೀಂದ್ರನ್ ಹೇಳಿದರು.
ಅರಣ್ಯ ಗಡಿ ಭಾಗದಲ್ಲಿ ವಾಸಿಸುವ ಜನರ ಸಮಸ್ಯೆಗಳನ್ನು ಅರಿತು ಪರಿಹರಿಸುವ ನಿಟ್ಟಿನಲ್ಲಿ ವಿವಿಧೆಡೆ ಹಮ್ಮಿಕೊಂಡಿರುವ ಅರಣ್ಯ ಸ್ನೇಹಿ ಸಭೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಚಿವರು ತಿಳಿಸಿದರು.