ಕಾಸರಗೋಡು: ಜಿಲ್ಲೆಯ ಹಲವೆಡೆ ಸಾರ್ವಜನಿಕ ಪರದೇಶದಲ್ಲಿ ತ್ಯಾಜ್ಯ ಸುರಿಯುತ್ತಿರುವುದು ಮುಂದುವರಿದಿದ್ದುಜ್ಯಿದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಸೂಚಿಸಿದ್ದಾರೆ. ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಮಾಹಿತಿ ನೀಡಿದರೂ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಕಸ ವಿಲೇವಾರಿ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಮಿನಿ ಸಮ್ಮೇಳನ ಸಭಾಂಗಣದಲ್ಲಿ ಜಮಾಯಿಸಿದ್ದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿ ಮಾತನಾಡಿದರು.
ಸಭೆಯಲ್ಲಿ ಪಂಚಾಯತ್ ಮಟ್ಟದಲ್ಲಿ ಸಾವಯವ ಮತ್ತು ಅಜೈವಿಕ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವ ಬಗ್ಗೆ ಸ್ಪಷ್ಟನೆ ನೀಡಲಾಯಿತು. ಹಸಿರು ಕ್ರಿಯಾ ಸೇನೆಯ ಕಾರ್ಯವನ್ನು ಬಲಪಡಿಸಲು ಕ್ರಮಕೈಗೊಳ್ಳಲಾಗುವುದು. ಮನೆಯ ಸಾವಯವ ತ್ಯಾಜ್ಯ ನಿರ್ವಹಣೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಗೃಹಸಂದರ್ಶನ ಕಾರ್ಯವನ್ನು ಏ. 25ರೊಳಗೆ ಪೂರ್ತಿಗೊಳಿಸಬೇಕು. ತ್ಯಜ್ಯ ನಿರ್ವಹಣೆ ನಡೆಸದ ಮನೆಗಳ ಮಾಹಿತಿಯನ್ನು ಭೇಟಿಯ ಸಮಯದಲ್ಲಿ ಸಂಗ್ರಹಿಸಬೇಕು. ಮನೆಗಳಲ್ಲಿ ಜೈವಿಕ ಗೊಬ್ಬರ ಅಥವಾ ಸಾವಯವ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಲ್ಲಿ, ಸ್ಥಳೀಯಾಡಳಿತ ಸಂಸ್ಥೆಗಳು ಅಂತಹ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯರು ಹಸಿರು ಕ್ರಿಯಾ ಶಕ್ತಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಭೆ ನಡೆಸಲಾಗುವುದು. ಅಜೈವಿಕ ತ್ಯಾಜ್ಯ ವಿಲೇವಾರಿ ಕುರಿತು ಜಿಲ್ಲೆಯ ವರ್ತಕರ ಸಭೆ ಶೀಘ್ರ ಆಯೋಜಿಸಲಾಗುವುದು. ಸ್ಥಳೀಯ ಪ್ರಾಧಿಕಾರದ ಜಂಟಿ ನಿರ್ದೇಶಕ ಜೈಸನ್ ಮ್ಯಾಥ್ಯೂ, ನವಕೇರಳ ಕ್ರಿಯಾ ಯೋಜನೆಯ ಜಿಲ್ಲಾ ಸಂಯೋಜಕ ಕೆ. ಬಾಲಕೃಷ್ಣನ್, ಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎನ್.ವಿ. ಬಿಮಲ್ ಉಪಸ್ಥಿತರಿದ್ದರು.