ನವದೆಹಲಿ: ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ.
137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 6:15ರ ವೇಳೆ ತುರ್ತು ಭೂಸ್ಪರ್ಶ ಮಾಡಿತು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ದೃಢಪಡಿಸಿದೆ.