ನವದೆಹಲಿ: ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದಲ್ಲಿ ಖಾಲಿ ಇರುವ ಸ್ಥಾನವನ್ನು ತಕ್ಷಣ ಭರ್ತಿ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಆಯೋಗದಲ್ಲಿ ಒಂದು ಸ್ಥಾನ ಖಾಲಿ ಇದೆ ಎಂದು ಕೇಂದ್ರ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿತ್ತು.