ಗೋಪೇಶ್ವರ : ಹಿಮಪಾತ ಮತ್ತು ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, ಹನುಮಾನ್ ಛಟ್ಟಿಯಲ್ಲಿರುವ ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್ ಆಗಿದೆ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ.
ಗಡಿ ರಸ್ತೆಗಳ ಸಂಸ್ಥೆಯು (ಬಿಆರ್‌ಒ) ಹೆದ್ದಾರಿಯ ಮೇಲೆ ಬಿದ್ದಿರುವ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲು ಯತ್ನಿಸುತ್ತಿದೆ.