ಕಾಸರಗೋಡು : ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಉಪಕುಲಪತಿ. ಪೆÇ್ರ. ಎಚ್. ವೆಂಕಟೇಶ್ವರಲು ಸಮಾರಂಭ ಉದ್ಘಾಟಿಸಿ ಮಾತನಾಡಿ, ನವ ಭಾರತ ರಚನೆಯಲ್ಲಿ ಅಂಬೇಡ್ಕರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸಮಾಝದಲ್ಲಿ ತುಳಿತಕ್ಕೊಳಗಾದವರನ್ನು ಮುಖ್ಯವಾಹಿನಿಗೆ ತರುವಲ್ಲಿ ಅವರು ನಿರಂತರವಾಗಿ ಶ್ರಮಿಸಿದರು. ಹೊಸ ತಲೆಮಾರು ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ರಿಜಿಸ್ಟ್ರಾರ್ ಡಾ.ಎಂ. ಮುರಳೀಧರನ್ ನಂಬಿಯಾರ್ ಅಧ್ಯಕ್ಷತೆ ವಹಿಸಿದ್ದರು. ಡೀನ್ ಅಕಾಡೆಮಿಕ್ ಪೆÇ್ರಫೆಸರ್ ಅಮೃತ್ ಜಿ ಕುಮಾರ್, ಇಂಗ್ಲಿಷ್ ಮತ್ತು ತುಲನಾತ್ಮಕ ಸಾಹಿತ್ಯ ವಿಭಾಗದ ಮುಖ್ಯಸ್ಥ ಪೆÇ್ರ. ಜೋಸೆಫ್ ಕೊಯಿಪ್ಪಳ್ಳಿ, ಸಮಾಜ ವಿಜ್ಞಾನ ಶಾಲೆಯ ಡೀನ್ ಪೆÇ್ರ. ಎ.ಕೆ. ಮೋಹನ್, ಗಣಿತ ವಿಭಾಗದ ಮುಖ್ಯಸ್ಥ ಪೆÇ್ರ. ಕೆ.ಎ, ಜರ್ಮಿನಾ, ಉಪ ಗ್ರಂಥಪಾಲಕ ಡಾ.ಪಿ. ಸೆಂಥಿಲ್ ಕುಮಾರನ್, ಸಹಾಯಕ ಪ್ರಾಧ್ಯಾಪಕಿ ಡಾ.ಉಮಾ ಪುರುಷೋತ್ತಮನ್, ವಿದ್ಯಾರ್ಥಿಗಳಾದ ಆಂಡ್ರಿಯಾ ಜಾನ್ ಮತ್ತು ಅಕ್ಷಯ ಅನೀಶ್ ಕುಮಾರ್ ಉಪಸ್ಥಿತರಿದ್ದರು.
ವಿಶೇಷ ಕರ್ತವ್ಯಾಧಿಕಾರಿ ಪೆÇ್ರ.ರಾಜೇಂದ್ರ ಪಿಲಾಂಗಟ್ಟೆ ಸ್ವಾಗತಿಸಿದರು. ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಪೆÇ್ರ.ಕೆ. ಅರುಣ್ ಕುಮಾರ್ ವಂದಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿದ್ದು, ವಿಜೇತರಿಗೆ ಉಪಕುಲಪತಿಗಳು ಬಹುಮಾನ ವಿತರಿಸಿದರು.
ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
0
ಏಪ್ರಿಲ್ 14, 2023
Tags