ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿಧನರಾಗಿದ್ದಾರೆ. ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ದಾಖಲಾಗಿದ್ದರು.
ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿಧನರಾಗಿದ್ದಾರೆ. ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ದಾಖಲಾಗಿದ್ದರು.
ಪ್ರಕಾಶ್ ಸಿಂಗ್ ಬಾದಲ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಾದಲ್ ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರ ಮಗ, ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ.