ಬದಿಯಡ್ಕ: ಕುಂಬ್ಡಾಜೆ ಕಜೆಮಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯಗಳ ಅಂಗವಾಗಿ ಭಾನುವಾರ ಅನುಜ್ಞಾಕಲಶ ಹಾಗೂ ಬಾಲಾಲಯ ಪ್ರತಿಷ್ಠೆ ಜರಗಿತು. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಪ್ರಾತಃಕಾಲ ತಾಂತ್ರಿಕ ಕಾರ್ಯಕ್ರಮಗಳು ಜರಗಿದವು. ಶ್ರೀದೇವರ ಬಾಲಾಲಯ ಪ್ರತಿಷ್ಠೆಯ ನಂತರ ಕಾಸರಗೋಡು ಗಿಡ್ಡ ತಳಿಯ ಹೋರಿಯ ಮೂಲಕ ಮೂಲ ಆಲಯದ ತೆರವಿನ ಕಾರ್ಯಕ್ಕೆ ಮುಂದಡಿಯಿಡಲಾಯಿತು. ಇದೇ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳನ್ನು ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ತಂತ್ರಿಗಳಿಂದ ಪ್ರಾರ್ಥನೆ ನೆರವೇರಿತು. ಊರ ಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ಕಜೆಮಲೆ ಶ್ರೀ ವಿಷ್ಣುಮೂರ್ತಿ ದೇವರಿಗೆ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ
0
ಏಪ್ರಿಲ್ 03, 2023
Tags